
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮೇ 18ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದು, ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ.
ಈ ಕುರಿತಂತೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.
ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ದೇವೇಗೌಡರು ಕೋರಿಕೊಂಡಿದ್ದಾರೆ.
