alex Certify ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಆಧಾರ್, ಪಡಿತರ ಚೀಟಿ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯ ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಯೋಜನೆಗೆ ಆಧಾರ್, ಪಡಿತರ ಚೀಟಿ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಭತ್ಯೆ ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಆಧಾರ್ ಸಂಖ್ಯೆ, ಬಿಪಿಎಲ್ ಪಡಿತರ ಚೀಟಿ ಕಡ್ಡಾಯ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ಇಂದು ಉಡುಪಿ ಜಿಲ್ಲೆಗೆಭೇಟಿ ನೀಡಿ ಮರಳಿದ ಬಳಿಕ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಅಧಿಕೃತ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಇಂದು ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಲಿದ್ದಾರೆ.  ಹಾನಿ ವೀಕ್ಷಿಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...