ಶಿವಮೊಗ್ಗ : ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳಿಂದ ಪ್ರವೇಶಾತಿ ಕಲ್ಪಿಸಲು ತಾಲೂಕು ಕಲ್ಯಾಣಾಧಿಕಾರಿಗಳು SHP ಲಾಗಿನ್ನಲ್ಲಿ ಫೆ.29 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ www.bcwd.karnataka.gov.in ನ್ನು ವೀಕ್ಷಿಸುವಂತೆ ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.