alex Certify ಗಮನಿಸಿ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ 2024ನೇ ಜನವರಿಯಿಂದ ಆರು ತಿಂಗಳ ರೆಗ್ಯುಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ಆಯೋಜಿಸಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಂದ ಹಾಗೂ ಸಹಕಾರ ಸಂಘ/ಬ್ಯಾಂಕ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಿದೆ.

ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಮಾಸಿಕ ರೂ. 500/- ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪ.ಜಾತಿ/ಪ.ಪಂ.ದ ಅಭ್ಯರ್ಥಿಗಳಿಗೆ ಮಾಸಿಕ ರೂ. 600/- ಶಿಷ್ಯವೇತನ ನೀಡಲಾಗುವುದು.
ಆಸಕ್ತರು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ವಿನೋಬನಗರ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. 15 ರೊಳಗಾಗಿ ಸಲ್ಲಿಸುವಂತೆ ಇನ್ಸ್ಟಿಟ್ಯೂಟ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-248873/ 7022429440 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...