alex Certify ಗಮನಿಸಿ : IAS, KAS ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ‘ಉಚಿತ ತರಬೇತಿ’ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : IAS, KAS ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ‘ಉಚಿತ ತರಬೇತಿ’ ಪಡೆಯಲು ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದವರಿಗೆ ಐಎಎಸ್ ಮತ್ತು ಕೆಎಎಸ್ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಆಸಕ್ತ ಆಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ನ https://sevasindhuservices.karnataka.gov.in ಗೆ ಭೇಟಿ ನೀಡಿ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬೇಕು.ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅಧಿಸೂಚನೆ ಮತ್ತು ವಿವರಗಳಿಗಾಗಿ ವೆಬ್ಸೈಟ್ http://dom.karnataka.gov.in ಗೆ ಭೇಟಿ ನೀಡಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ನಗರದ ಹಜ್ ಭವನದಲ್ಲಿ 10 ತಿಂಗಳ ವಸತಿ ಸಹಿತ ತರಬೇತಿಯನ್ನು ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...