alex Certify ಗಮನಿಸಿ : ಅಲ್ಪಸಂಖ್ಯಾತ ಸಮುದಾಯದ ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಅಲ್ಪಸಂಖ್ಯಾತ ಸಮುದಾಯದ ‘ಮೆಟ್ರಿಕ್ ಪೂರ್ವ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಒಂದರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ 2023-24 ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎನ್ಎಸ್ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್ಎಸ್ಪಿ ಪೋರ್ಟಲ್ https://ssp.prematric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ಪ್ರೆಶ್)ನಲ್ಲಿ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214, ಮಾಹಿತಿ ಕೇಂದ್ರ, ಸೋಮವಾರಪೇಟೆ 8548068519, ಮಾಹಿತಿ ಕೇಂದ್ರ, ಪೊನ್ನಂಪೇಟೆ 9900731037 ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್ಎಸ್ಪಿ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in/kodagu/public ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...