alex Certify ಗಮನಿಸಿ : ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ರಂಗ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಮಡಿಕೇರಿ : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಆದ್ಯತೆ ಇದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ ಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತದೆ.

ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577-515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗ ಶಾಲೆಯ ವೆಬ್‍ಸೈಟ್ www.theatreschoolsanehalli.org ನಲ್ಲಿ ಪ್ರವೇಶ ಅರ್ಜಿ ಡೌನ್‍ಲೋಡ್ ಮಾಡಿ ಜೂನ್, 25 ರೊಳಗೆ ರಂಗಶಾಲೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 9448398144, 8861043553, 9482942394, 9972007015 ನ್ನು ಸಂಪರ್ಕಿಸಬಹುದು ಎಂದು ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿ ಶಿವಕುಮಾರ ರಂಗಪ್ರಯೋಗ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...