ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪ್ರಸ್ತಕ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಯುಪಿಎಸ್ಸಿ ಕೋರ್ಸ್ಗಳಾದ ಐಎಎಸ್, ಐಎಫ್ಎಸ್, ಐಪಿಎಸ್, ಐಆರ್ಎಸ್ ಸೇರಿದಂತೆ 36 ವಿವಿಧ ಸೇವೆಯ ಹುದ್ದೆಗಳ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯುಪಿಎಸ್ಸಿ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗಧಿತ ಗುರಿಗನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.ಸ್ಥಾನ ಹಂಚಿಕೆಯಲ್ಲಿ ಅಂಗವಿಕಲ/ವಿಕಲಚೇತನ, ಹಾಸ್ಟೆಲ್ ವಿದ್ಯಾರ್ಥಿಗಳು, ವಸತಿ ಶಾಲೆಯ ವಿದ್ಯಾರ್ಥಿಗಳು, ಮಹಿಳಾ ವಿದ್ಯಾರ್ಥಿಗಳು, ಸೂಕ್ಷ್ಮ
/ಅತಿ ಸೂಕ್ಷ್ಮ ಸಮುದಾಯ/ಸಫಾಯಿ ಕರ್ಮಚಾರಿ ಸಮುದಾಯದ ಮಕ್ಕಳಿಗೆ ವಿಶೇಷ ಮೀಸಲಾತಿ ಇರುತ್ತದೆ.
ತರಬೇತಿಗೆ ಪದವಿಯಲ್ಲಿ ಉತ್ತೀರ್ಣರಾಗಿರುವ ಮತ್ತು ಅಂತಿಮ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದು, ಆಯ್ಕೆ ಪ್ರಕ್ರಿಯ ಹಂತದಲ್ಲಿ ಪದವಿ ವ್ಯಾಸಂಗ ಪೂರ್ಣ ಮುಕ್ತಾಯಗೊಳಿಸಿರುವ ಬಗ್ಗೆ ಅಧಿಕೃತ ದಾಖಲೆಗಳನ್ನು ಹೊಂದಿರಬೇಕು.ಆಸಕ್ತಿಯುಳ್ಳ ವಿದ್ಯಾರ್ಥಿಗಳು ನ.30 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಚೇರಿ ಮತ್ತು ದೂ:08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.