ಬಳ್ಳಾರಿ : ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್ನಲ್ಲಿ ನೋಂದಣಿಯಾದ ಅಸಂಘಟಿತ ಕಾರ್ಮಿಕರು ಅಪಘಾತಗೊಂಡಿದ್ದಲ್ಲಿ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಪಘಾತ ಪರಿಹಾರಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಸಂಘಟಿತ ಕಾರ್ಮಿಕರಾಗಿ ವಿವಿಧ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿ ಸರ್ಕಾರದ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ 379 ವಿವಿಧ ವರ್ಗದ ಕಾರ್ಮಿಕರು 2021ರ ಆ.26ರಿಂದ 2022ರ ಮಾ.31ರವರೆಗೆ ನೋಂದಣಿಯಾಗಿರಬೇಕು. ಅಪಘಾತ ಅನುಭವಿಸಿರುವÀ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ರೂ.2 ಲಕ್ಷ ಪರಿಹಾರ ಒದಗಿಸಲಾಗುವುದು.
ಅಗತ್ಯ ದಾಖಲೆಗಳು
ಫಲಾನುಭವಿಯ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್ ಕಾರ್ಡ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್ಐಆರ್ ಅಥವಾ ಪಂಚನಾಮ ದಾಖಲೆ.
ಅಂಗವೈಕಲ್ಯ ಹೊಂದಿದ್ದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯುಎಎನ್ ಕಾರ್ಡ್(ಇ-ಶ್ರಮ್ ಕಾರ್ಡ್) ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆಗಳೊಂದಿಗೆ ನಗರದ ಮಹಮ್ಮದಿಯ ಕಾಲೇಜ್ ಹಿಂಭಾಗ ಕೌಲ್ಬಜಾರ್ ನಲ್ಲಚೇರುವು ಉಪ ವಿಭಾಗ ಕಾರ್ಮಿಕ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕ ಕಚೇರಿ ಅಧಿಕಾರಿ ಮತ್ತು ದೂ.08392-254875 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಉಪ ವಿಭಾಗ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.