ಬೆಂಗಳೂರು ನಗರ ಜಿಲ್ಲೆ : ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ದಕ್ಷಿಣ ತಾಲ್ಲೂಕು ಪ್ರದೇಶದಲ್ಲಿ ರಾಜೀನಾಮೆ ನೀಡರುವ ನ್ಯಾಯಬೆಲೆ ಅಂಗಡಿಯ ಪ್ರದೇಶ ಹಾಗೂ ಕನಿಷ್ಠ ಪಡಿತರ ಚೀಟಿಗಳಿಂದ ಹೆಚ್ಚಿನ ಪಡಿತರ ಚೀಟಿ ಹೊಂದಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆ/ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೊಸ ನ್ಯಾಯಬಲೆ ಅಂಗಡಿ ತೆರೆಯಲು ನಿಗಧಿಪಡಿಸಿರುವ ಪ್ರದೇಶ ಸಿಂಗಸಂದ್ರ ಗ್ರಾಮ ಪಂಚಾಯಿತಿಯ ವಾರ್ಡ್ ನಂ: 191 ಚನ್ನಕೇಶವ ನಗರದಲ್ಲಿ ಪಡಿತರ ಚೀಟಿ ಸಂಖ್ಯೆ: 905, ಕೋನಪ್ಪನ ಅಗ್ರಹಾರ ಗ್ರಾಮ ಪಂಚಾಯತಿಯಲ್ಲಿ ಪಡಿತರ ಚೀಟಿ ಸಂಖ್ಯೆ:804, ಉತ್ತರ ಹಳ್ಳಿ ಗ್ರಾಮ ಪಂಚಾಯಿತಿಯ ವಾರ್ಡ್ ನಂ-184ರ ವ್ಯಾಪ್ತಿಯಲ್ಲಿ ಪಡಿತರ ಚೀಟಿ ಸಂಖ್ಯೆ:957 ಹಾಗೂ ಅಂಜನಾಪುರ ಗ್ರಾಮ ಪಂಚಾಯಿತಿಯ ವಾರ್ಡ್ ನಂ-196 ರ ವ್ಯಾಪ್ತಿಯಲ್ಲಿ 800 ಪಡಿತರ ಚೀಟಿ.
ಹೊಸ ನ್ಯಾಯಬಲೆ ಅಂಗಡಿ ಪ್ರಾಧಿಕರಣ ಪಡೆಯಲು ತಾಲ್ಲೂಕು ಕೃಷಿ ಪ್ರಾಥಮಿಕ ಪತ್ತಿನ ಮಾರಾಟ ಸಹಕಾರ ಸಂಘ, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವ್ಯವಸಾಯೋತ್ಪನ್ನ ಸಹಕಾರ ಸಂಘ, ತೋಟಗಾರಿಕಾ ಉತ್ಪನ್ನಗಳ ಬಳಕೆದಾರರ ಸಹಕಾರ ಸಂಘ, ನೊಂದಾಯಿತ ಸಹಕಾರ ಸಂಘ, ನೊಂದಾಯಿತ ಪ್ರಾಥಮಿಕ ಬಳಕೆದಾರರು ಸಹಕಾರ ಸಂಘಗಳು, ಬೃಹತ್ ಪ್ರಮಾಣದ ಆದಿವಾಸಿ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ನೇಕಾರರು ಸಹಕಾರ ಸಂಘಗಳು, ನೊಂದಾಯಿತ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ, ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘ, ದೈಹಿಕ ಅಂಗವಿಕಲ ಕಲ್ಯಾಣ ಸಹಕಾರ ಸಂಘ, ಬ್ಯಾಂಕುಗಳನ್ನು ನಡೆಸುತ್ತಿರುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕುಗಳು, ಸ್ತೀ ಶಕ್ತಿ ಸಂಘಗಳು/ಮಹಿಳಾ ಸ್ವ ಸಹಾಯ ಸಂಘಗಳಿಗೆ ಆದ್ಯತೆ ಮೇರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ವಿಕಲಚೇತನರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗು (ಇತರರು) ಅವಕಾಶವನ್ನು ಕಲ್ಪಿಸಲಾಗಿದೆ.
ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಉಪನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಸಹಾರಗಳ ಇಲಾಖೆ, ಬೆಂಗಳೂರು ಇಲ್ಲಿ ಡಿಸೆಂಬರ್ 05 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22215594 ಗೆ ಸಂಪರ್ಕಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.