ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ.
ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ ಮತ್ತು ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್ ಕೈಗಾರಿಕಾ ವಲಯದಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ.
ಸಿಪೆಟ್ 2024-25ನೇ ಸಾಲಿನ ಉದ್ಯೋಗಾದಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿಪಿಟಿ), ಡಿಪೆÇ್ಲೀಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ(ಡಿಪಿಎಂಟಿ)–3 ವರ್ಷದ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ.ನಾಗರಳ್ಳಿ ಅವರು ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ಪಿಯುಸಿ(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು/ ಹಾಜರಾದವರು ಆನ್ಲೈನ್/ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ www.cipet.gov.in ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಮೇ, 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ 0821-2510618, 9480253024, 9791431827, 9466585669 ನ್ನು ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಿನ್ಸಿಪಾಲ್ ನಿರ್ದೇಶಕರು ಮತ್ತು ಮುಖ್ಯಸ್ಥರು (9466146001) ತಿಳಿಸಿದ್ದಾರೆ.