ಶಿವಮೊಗ್ಗ : 2023-24 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯು ರಾಜ್ಯದಲ್ಲಿ ನಡೆಸುತ್ತಿರುವ ಮುಸ್ಲಿಂ ಸಮುದಾಯದ ನೋಂದಾಯಿತ ಮದರಸಗಳಿಗೆ ಆಧುನೀಕರಣ, ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅರ್ಹ ಮದರಸಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು https://dom.karnataka.gov.in ಲಿಂಕ್ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಬಹುದಾಗಿದ್ದು ಜ.20 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಪ್ರಸ್ತಾವನೆ ಸಲ್ಲಿಸುವ ಮದರಸಗಳು ವಕ್ಫ್ ಮಂಡಳಿಯಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಹಾಗೂ ಮದರಸಾ ಕುರಿತು ಸವಿಸ್ತಾರವಾದ ವಿವರ ನೀಡಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ, ಶಿವಮೊಗ್ಗ ದೂ.ಸಂ: 08182-220206 ನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.