ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 20 ಗ್ರಾಮ ಪಂಚಾಯತ್ ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಕರಿಕೆ, ಅಯ್ಯಂಗೇರಿ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು, ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು, ನಾಲ್ಕೇರಿ, ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ಹಾನಗಲ್ಲು, ವಿರಾಜಪೇಟೆ ತಾಲ್ಲೂಕಿನ ಬೆಟೋಳಿ, ಅಮ್ಮತ್ತಿ, ಮಾಲ್ದಾರೆ, ಹೊಸೂರು, ಆರ್ಜಿ ಮತ್ತು ಚೆನ್ನಯ್ಯನಕೋಟೆ ಗ್ರಾ.ಪಂ.
ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9148712473 ಇ-ಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ತಿಳಿಸಿದ್ದಾರೆ.