alex Certify ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಗಮನ ಬೇರೆಡೆ ಸೆಳೆಯಲು ಮತ್ತೊಮ್ಮೆ ನೋಟ್ ಬ್ಯಾನ್: ಸಿದ್ಧರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರದ ವೈಫಲ್ಯಗಳಿಂದ ಗಮನ ಬೇರೆಡೆ ಸೆಳೆಯಲು ಮತ್ತೊಮ್ಮೆ ನೋಟ್ ಬ್ಯಾನ್: ಸಿದ್ಧರಾಮಯ್ಯ ಆಕ್ರೋಶ

2,000 ಮುಖಬೆಲೆಯ ನೋಟು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್(RBI) ಶುಕ್ರವಾರ ಹೇಳಿದೆ.

ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ನೋಟು ನಿಷೇಧ ಮಾಡಿದೆ ಎಂದು ನಿಯೋಜಿತ ಸಿಎಂ ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೋಟ್ ಬ್ಯಾನ್ ನಿರ್ಧಾರ ದುಃಖಕರವಾಗಿದೆ. ಬಿಜೆಪಿ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆ ಇಲ್ಲ. 2,000 ರೂ. ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದರೆ ಅದನ್ನು 2016ರಲ್ಲಿ ಏಕೆ ಪರಿಚಯಿಸಿದರು? ಎಂದು ಪ್ರಶ್ನಿಸಿದ್ದಾರೆ.

ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿಯ ಹತಾಶ ಪ್ರಯತ್ನ ಇದಾಗಿದೆ ಎಂದು 2 ಸಾವಿರ ರೂ. ನೋಟ್ ಬ್ಯಾನ್ ಮಾಡಿರುವುದನ್ನು ಸಿದ್ಧರಾಮಯ್ಯ ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...