alex Certify ಗಮನಿಸಿ : ನಾಳೆಯಿಂದ BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನಾಳೆಯಿಂದ BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

ಬೆಂಗಳೂರು : ನಾಳೆಯಿಂದ BPL ಕಾರ್ಡ್ (BPL CARD)  ಹೆಸರು ಸೇರ್ಪಡೆ, ತಿದ್ದುಪಡಿಗೆ ಆಹಾರ ಇಲಾಖೆ ಅವಕಾಶ ನೀಡಿದೆ.

ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ ಕೇಂದ್ರದಲ್ಲಿ ಜನರು BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು. ಅಕ್ಟೋಬರ್ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

2 ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಕಾವೇರಿ, ಕೊಡಗು , ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು ಎಂದು ಆಹಾರ ಇಲಾಖೆ ಪ್ರಕಟಣೆ ಹೊರಡಿಸಿದೆ. ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...