![](https://kannadadunia.com/wp-content/uploads/2018/11/KEA_logo.jpg)
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19 ರಂದು ನಡೆಸಲು ಉದ್ದೇಶಿಸಿರುವ ಪ್ರಸಕ್ತ ಸಾಲಿನ ಸಿಇಟಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶವನ್ನು ಫೆ. 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಆನ್ಲೈನ್ ಅರ್ಜಿ ಸಲ್ಲಿಸದೆ ಇರುವ ಹಾಗು ಶುಲ್ಕವನ್ನು ಪಾವತಿಸದೆ ಇರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ದಿನಾಂಕ 18-04-2024 ಮತ್ತು 19-04-2024 ರಂದು ನಡೆಸಲಾಗುವ ಸಿಇಟಿ-2024ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20-02-2024 ರ ರಾತ್ರಿ 11.59 ರವರೆಗೆ ಹಾಗು 23-02-2024 ರ ಸಂಜೆ 5.30 ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲಾಗಿರುತ್ತದೆ ಎಂದು ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
![](https://kannadadunia.com/wp-content/uploads/2024/02/WhatsApp-Image-2024-02-01-at-4.55.05-AM.jpeg)