ಭ್ರೂಣ ಲಿಂಗಪತ್ತೆಯನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸಿದವರಿಗೆ ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ವಿಧಿಸಲಾಗುತ್ತದೆ. ಇಷ್ಟಾದರೂ ಕೂಡ ಕೆಲವರು ಭ್ರೂಣ ಲಿಂಗ ಪತ್ತೆ ಕಾರ್ಯಕ್ಕೆ ಮುಂದಾಗುತ್ತಿದ್ದು, ಇತ್ತೀಚೆಗಷ್ಟೇ ಮಂಡ್ಯ ಜಿಲ್ಲೆಯಲ್ಲಿ ಇಂತಹ ಒಂದು ಪ್ರಕರಣ ಬೆಳಕಿಗೆ ಬಂದು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಒಂದಷ್ಟು ಮಾಹಿತಿ ಇಲ್ಲಿದೆ.
ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.
ಭ್ರೂಣ ಲಿಂಗ ಪತ್ತೆ, ಭ್ರೂಣ ಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡುವಂತಿಲ್ಲ. ಉಲ್ಲಂಘಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಜೊತೆಗೆ ₹10,000 ದ ವರೆಗೆ ದಂಡ ವಿಧಿಸಲಾಗುವುದು.