alex Certify ಗಮನಿಸಿ : ನ.1 ರಿಂದ ಮತ್ತೊಮ್ಮೆ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ : ಈ ದಾಖಲೆಗಳನ್ನು ಇಟ್ಟುಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನ.1 ರಿಂದ ಮತ್ತೊಮ್ಮೆ `ರೇಷನ್ ಕಾರ್ಡ್’ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ : ಈ ದಾಖಲೆಗಳನ್ನು ಇಟ್ಟುಕೊಳ್ಳಿ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ನವೆಂಬರ್ 1 ರಿಂದ ಮತ್ತೊಮ್ಮೆ ಅವಕಾಶ ನೀಡಲು ಮುಂದಾಗಿದೆ.

ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 19 ರಿಮದ 21 ರವರೆಗೆ ಅವಕಾಶ ನೀಡಿತ್ತು.ಆದರೆ ಸರ್ವರ್ ಸಮಸ್ಯೆಯಿಂದ ಬಹುತೇಕ ಪಡಿತರ ಕಾರ್ಡ್ ಗಳ ತಿದ್ದುಪಡಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ ಮತ್ತೊಮ್ಮೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ.

ಪಡಿತರ ಚೀಟಿಯಲ್ಲಿ ಹೆಸರು ತಪ್ಪಾಗಿದ್ದರೆ ಸರಿಪಡಿಸುವುದು, ಹೊಸ ಹೆಸರುಗಳು ಸೇರ್ಪಡೆ, ವಿಳಾಸ ಬದಲಾವಣೆ, ಪಡಿತರ ಚಿಟಿಗಳಲ್ಲಿನ ಕುಟುಂಬದ ಸದಸ್ಯರ ಹೆಸರು ತೆಗೆದು ಹಾಕುವುದು ಮೊದಲಾದ ತಿದ್ದುಪಡಿಗಳನ್ನು ಮಾಡಿಕೊಳ್ಳಲು ಆಹಾರ ಇಲಾಖೆಯು ನವೆಂಬರ್ 1 ರಿಂದ ಮತ್ತೊಮ್ಮೆ ಅವಕಾಶ ನೀಡಲು ಮುಂದಾಗಿದೆ.

ಹೆಸರು ಸೇರಿಸುವುದು ಹೇಗೆ..? ( ಆಫ್ ಲೈನ್)

1) ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಹೆಸರು ನೋಂದಾಯಿಸಲು ಆಹಾರ ಇಲಾಖೆಯ ಕಚೇರಿಗೆ ತೆರಳಿ ಫಾರ್ಮ್ ಪಡೆಯಬೇಕು.

2) ಈ ನಮೂನೆಯಲ್ಲಿ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಆಹಾರ ಇಲಾಖೆ ಕೇಂದ್ರಕ್ಕೆ ಸಲ್ಲಿಸಿ..ಆದರೆ ಈ ಫಾರ್ಮ್ ಅನ್ನು ಸಲ್ಲಿಸಿದ ನಂತರ, ರಸೀದಿಯನ್ನು ತಪ್ಪದೇ ತೆಗೆದುಕೊಳ್ಳಿ.

3) ಇದಾದ ನಂತರ ದಾಖಲೆಗಳನ್ನು ಪರಿಶೀಲಿಸಿದ ನಂತರ ಹೊಸ ಪಡಿತರ ಚೀಟಿಯನ್ನು ಪಡೆಯಬಹುದು.

ಆನ್ ಲೈನ್ ನಲ್ಲಿ ಹೇಗೆ..?

1) ಮೊದಲು ನೀವು https ಗೆ ಭೇಟಿ ನೀಡಿ://fcs.up.gov.in/FoodPortal.aspx ವೆಬ್ಸೈಟ್ ಓಪನ್ ಮಾಡಿ.

2) ಇದಾದ ಬಳಿಕ ಈ ವೆಬ್ಸೈಟ್ಗೆ ಲಾಗಿನ್ ಮಾಡಿ. ನೀವು ಈಗಾಗಲೇ ಲಾಗಿನ್ ಐಡಿ ಹೊಂದಿದ್ದರೆ, ನೀವು ಲಾಗಿನ್ ಮಾಡಬೇಕಾಗುತ್ತದೆ.

3) ಮುಖಪುಟದಲ್ಲಿ ಹೊಸ ಸದಸ್ಯರ ಹೆಸರನ್ನು ನೋಂದಾಯಿಸುವ ಆಯ್ಕೆ ಕಾಣಿಸುತ್ತದೆ. ಅಲ್ಲಿ ಕ್ಲಿಕ್ ಮಾಡಿ

4) ಬಳಿಕ ಅಲ್ಲಿ ಒಂದು ಫಾರ್ಮ್ ಓಪನ್ ಆಗುತ್ತದೆ, ಹೊಸ ಸದಸ್ಯರ ಬಗ್ಗೆ ಅಗತ್ಯವಿರುವ ಮಾಹಿತಿಯನ್ನು ಇಲ್ಲಿ ಸರಿಯಾಗಿ ಭರ್ತಿ ಮಾಡಿ. ಕೇಳಿರುವ ಎಲ್ಲಾ ದಾಖಲೆಗಳನ್ನು ಸಹ ಅಪ್ಲೋಡ್ ಮಾಡಬೇಕು.

ಇದಾದ ಬಳಿಕ ಈ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ SUBMIT ಆಯ್ಕೆಯನ್ನು ಕ್ಲಿಕ್ ಮಾಡಿ.
ಫಾರ್ಮ್ ಅನ್ನು ಸಲ್ಲಿಸಿದ ನಂತರ ನೋಂದಣಿ ಸಂಖ್ಯೆ ಬರುತ್ತದೆ. ಈ ನೋಂದಣಿ ಸಂಖ್ಯೆಯಿಂದ ನೀವು ಈ ಫಾರ್ಮ್ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಟ್ರ್ಯಾಕ್ ಮಾಡಬಹುದು. ಎಲ್ಲಾ ಮಾಹಿತಿಗಳು ಸರಿಇದ್ದರೆ ಅಂಚೆ ಮೂಲಕ ಹೊಸ ರೇಷನ್ ಕಾರ್ಡ್ ಕಳುಹಿಸಲಾಗುತ್ತದೆ.

ರೇಷನ್ ಕಾರ್ಡ್ ಅಪ್ ಡೇಟ್ ಮಾಡಲು ಏನೆಲ್ಲಾ ದಾಖಲೆಗಳು ಬೇಕು..?

ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು. ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...