ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೆಟ್(ಡಿಎಲ್ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯು ಗೆ ಸಹಿ ಹಾಕಿದೆ.
ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ ಪರಿಶೀಲಿಸಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮೆನ್ ಮೂಲಕ 70 ರೂ. ಶುಲ್ಕ ಪಾವತಿಸಿ, ಈ ಸೌಲಭ್ಯ ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರ ಸಲ್ಲಿಸುವಂತೆ ಕೊಡಗು ವಿಭಾಗದ ಅಂಚೆ ಅಧೀಕ್ಷಕರು(ಜಿಲ್ಲಾ ಅಂಚೆ ಇಲಾಖೆ) ತಿಳಿಸಿದ್ದಾರೆ.