
ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿದೆ, ಇಂದಿನಿಂದ ಕೆಲ ಜಿಲ್ಲೆಗಳಲ್ಲಿ ಮಾತ್ರ ಅವಕಾಶ ಇರಲಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವವರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಆಹಾರ ಇಲಾಖೆಯ ಆದೇಶದಂತೆ ಅಕ್ಟೋಬರ್ 19 ರ ಇಂದಿನಿಂದ ಅ.21 ರವರೆಗೆ ಹಲವು ಜಿಲ್ಲೆಗಳಲ್ಲಿ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡೆಗೆ ಅವಕಾಶ ನೀಡಿದೆ. ಪಡಿತರ ಚೀಟಿದಾರರು ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು.
ಇಂದಿನಿಂದ ಅ.21 ರವರೆಗೆ ಈ ಜಿಲ್ಲೆಗಳಲ್ಲಿ ಹೆಸರು ಸೇರ್ಪಡೆ/ತಿದ್ದುಪಡೆಗೆ ಅವಕಾಶ
ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ