ಶಿವಮೊಗ್ಗ : ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿ, ಕೊಡಗು, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿಗಳಲ್ಲಿ, ತಹಶೀಲ್ದಾರರುಗಳು ಕಚೇರಿಗಳಲ್ಲಿ, ಮಂಗಳೂರು ಮತ್ತು ಶಿವಮೊಗ್ಗ ಮಹಾನಗರಪಾಲಿಕೆ ಕಚೇರಿಗಳಲ್ಲಿ ಪರಿಶೀಲನೆಗಾಗಿ ಲಭ್ಯವಿರುತ್ತದೆ ಎಂದು ಮತದಾರರ ನೋಂದಣಾಧಿಕಾರಿ ಹಾಗೂ ಕ.ನೈ.ಶಿ ಮತ್ತು ಕ.ನೈ.ಪ.ಕ್ಷೇ ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.