ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಗೆ ಮಾರ್ಚ್, 31 ಕೊನೆಯ ದಿನಾಂಕ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ.ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾರ್ಚ್, 31 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರಾಮುವಿ, ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಸ್ನಾತಕ/ಸ್ನಾತಕೋತ್ತರ ಕೋಸ್ರ್ಗಳಾದ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲ್ಯು, ಎಂ.ಎ, ಎಂ.ಸಿ.ಜೆ, ಎಂ.ಕಾಂ, ಎಂ.ಎಸ್ಸಿ, ಎಂಲಿಬ್ಐಎಸ್ಸಿ,{ಎಂಬಿಎ, ಎಂಸಿಎ, ಎಂಎಸ್ಡಬ್ಲ್ಯು ಮತ್ತು ಪಿಜಿ ಸರ್ಟಿಫಿಕೇಟ್ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ .
ಹೆಚ್ಚಿನ ವಿವರಗಳಿಗೆ ಕ.ರಾ.ಮು.ವಿ. ಪ್ರಾದೇಶಿಕ ನಿರ್ದೇಶಕರು, ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ, ಮಡಿಕೇರಿ-571201 ದೂ. 08272-201147, 8073342310, 9483391260, 8296215714, 9611320191, 9743576338, 7411233007, 9844395986 ನ್ನು ಸಂಪರ್ಕಿಸಬಹುದು ಎಂದು ಸ್ಮಿತಾ ಸುಬ್ಬಯ್ಯ ಅವರು ಹೇಳಿದ್ದಾರೆ.