alex Certify ಗಮನಿಸಿ : ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಡೆಯುವ ಭಾಗ್ಯ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಡೆಯುವ ಭಾಗ್ಯ ಇಲ್ಲ

ಬೆಂಗಳೂರು : ಆಗಸ್ಟ್ 30 ರಂದು  ‘ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದು, ಅದೇ ದಿನ ಮಹಿಳೆಯರ ಖಾತೆಗೆ 2,000 ರೂ. ಜಮಾ ಮಾಡಲಾಗುತ್ತದೆ.

ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು. ಆಗಸ್ಟ್ 30 ರಿಂದ ಮಹಿಳೆಯರ ಖಾತೆಗೆ ಹಣ ಹಾಕುವ ಪ್ರಕ್ರಿಯೆ ಆರಂಭವಾಗುತ್ತದೆ. ಆದರೆ ಈ ಮಹಿಳೆಯರಿಗೆ ಮಾತ್ರ ‘ಗೃಹಲಕ್ಷ್ಮಿ’ ಯ 2000 ಹಣ ಪಡೆಯುವ ಭಾಗ್ಯ ಇಲ್ಲ. ಈಗ ಹೌದು. ಸರ್ಕಾರಕ್ಕೆ ಹೊಣೆ ಆಗಬಾರದು ಎಂದು ಕಾರಣಕ್ಕಾಗಿ BPL ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಾತ್ರ ಹಣ ವರ್ಗಾವಣೆ ಆಗುವುದು ಎಂದು ಯೋಜನೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

* ಈ ಮಹಿಳೆಯರಿಗೆ 2000 ರೂ ಹಣ ಪಡೆಯುವ ಭಾಗ್ಯ ಇರಲ್ಲ : 

1) ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೂ ಗೃಹಲಕ್ಷ್ಮಿ ಯೋಜನೆ ಸಹಾಯಧನ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

2) ನಾಲ್ಕು ಚಕ್ರದ ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಮಹಿಳೆಯರಿಗೆ 2000 ಹಣ ಸಿಗಲ್ಲ.
3) ಸರ್ಕಾರಿ ಹುದ್ದೆ ಹೊಂದಿರುವ ಮತ್ತು ಪೆನ್ಷನ್ ಪಡೆಯುವ ಕುಟುಂಬದ ಮಹಿಳೆಯರಿಗೆ ಹಣ ಸಿಗಲ್ಲ.
4) ಆದಾಯ ತೆರಿಗೆ, ಪ್ರೊಫೆಷನಲ್ ಟ್ಯಾಕ್ಸ್ , GST ರಿಟರ್ನ್ಸ್ ಪಾವತಿಸುವ ಕುಟುಂಬದ ಮಹಿಳೆಯರಿಗೆ ಹಣ ಸಿಗಲ್ಲ

5) ಏಳು ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ಕುಟುಂಬದ ಮಹಿಳೆಯರಿಗೆ ಹಣ ಸಿಗಲ್ಲ.

ಮುಖ್ಯವಾದ ವಿಚಾರ ಅಂದ್ರೆ ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸದ ಮಾತ್ರಕ್ಕೆ ಹಣ ಜಮೆ ಆಗಲ್ಲ, ತಪ್ಪದೇ ನೀವು ಈ ಕೆಲಸ ಮಾಡಬೇಕು .ಅರ್ಜಿ ಸಲ್ಲಿಕೆ ಪೂರ್ತಿಯಾದ ಮೇಲೂ ಈ ಕೆಲಸ ಮಾಡದಿದ್ದರೆ ಅವರು ಯೋಜನೆಯಿಂದ ವಂಚಿತರಾಗಬಹುದು. ಯಾಕೆಂದರೆ ಯಜಮಾನಿಯರು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು. ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು. ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಲಾಗಿದ್ದು. ಆದ್ದರಿಂದ ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಗಾಗಿ ಅರ್ಜಿ ಸಲ್ಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...