
ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು 10.000 ರೂ. ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.