ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಫೆ.06 ರಂದು ಬೆಳಗ್ಗೆ 9.00 ರಿಂದ ಸಂಜೆ 5.00 ರ ವರೆಗೆ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಾದ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ ನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್.
ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.