alex Certify ಗಮನಿಸಿ : ಸ್ವ-ಸಹಾಯ ಗುಂಪು, ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಸ್ವ-ಸಹಾಯ ಗುಂಪು, ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ ಸಿರುಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ದೀನ್ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ ವ್ಯಕ್ತಿಗತ ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಫಲಾನುಭವಿಗಳು ಸಿರುಗುಪ್ಪ ನಗರಸಭೆ ನಿವಾಸಿಯಾಗಿದ್ದು, ಬಡತನರೇಖೆ ಕೆಳಗಿನ ಕುಟುಂಬದವರಾಗಿರಬೇಕು, ಅರ್ಜಿ ಸಲ್ಲಿಸುವ ಕೊನೆಯ ದಿನ ಜೂ.29 ಆಗಿರುತ್ತದೆ. ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು.

*ಬೇಕಾದ ದಾಖಲೆಗಳು

ರೇಷನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮೂರು ಭಾವಚಿತ್ರಗಳು, ಸ್ವಯಂ ಉದ್ಯೋಗದ ಬಗ್ಗೆ ಭಾವಚಿತ್ರ, ಗುಂಪಿಗೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, ಅಂಗವಿಕಲರಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ನಗರಸಭೆ ಕಾರ್ಯಾಲಯ ಹಾಗೂ ಮೊ.7353745626 ಗೆ ಸಂಪರ್ಕಿಸಬಹುದು ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...