alex Certify ಗಮನಿಸಿ : ಆ. 31 ರ ಒಳಗೆ ಈ ಕೆಲಸ ಮಾಡದಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಆ. 31 ರ ಒಳಗೆ ಈ ಕೆಲಸ ಮಾಡದಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತೆ.!

ಪಡಿತರ ಚೀಟಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ …. ಆ. 31 ರ ಒಳಗೆ ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ. ಹೌದು. ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ.

ಆ.31 ರೊಳಗೆ ನೀವು ತಪ್ಪದೇ ಇ-ಕೆವೈಸಿ ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ. . ಅನೇಕರು ಆಧಾರ್ ಕಾರ್ಡ್ ಅನ್ನು ರೇಷನ್ ಕಾರ್ಡ್ ಗೆ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸಿಲ್ಲ, ನಿಮ್ಮ ಕುಟುಂಬ ಸದಸ್ಯರ e-kyc ಅಪ್ಡೇಟ್ ಆಗದಿರುವುದು ಅಥವಾ ನೀಡಿರುವ ಆಧಾರ್ ಕಾರ್ಡ್ ಮಾಹಿತಿ ತಪ್ಪಾಗಿರುವುದು , ಬ್ಯಾಂಕ್ ಅಕೌಂಟ್ ಮಾಹಿತಿ ನೀಡಿರುವುದು ಈ ಎಲ್ಲಾ ಕಾರಣದಿಂದ ಹಲವರು ಅನ್ನಭಾಗ್ಯ ಯೋಜನೆ ಹಣದಿಂದ ವಂಚಿತರಾಗಿದ್ದಾರೆ. ಆದ್ದರಿಂದ ತಪ್ಪದೇ ನೀವು ಈ ಕೆಲಸ ಮಾಡಬೇಕು.

ಇ ಕೆವೈಸಿ ಮಾಡಲು ಬಾಕಿ ಇರುವವರಿಗೆ ಆ. 31ರ ಕೊನೆಯ ಗಡುವು ನೀಡಲಾಗಿದೆ. ಒಂದು ವೇಳೆ ಮಾಡಿಸದಿದ್ದಲ್ಲಿ ಅಂತಹ ಸದಸ್ಯಗಳನ್ನು ಪಡಿತರ ಚೀಟಿಯಿಂದ ತೆಗೆದು ಹಾಕಲಾಗುತ್ತದೆ. ಜತೆಗೆ ಫಲಾನುಭವಿಗಳಿಗೆ ಆಹಾರಧಾನ್ಯ ಮತ್ತು ಡಿಬಿಟಿ ನಗದು ಸೌಲಭ್ಯವನ್ನು ಸ್ಥಗಿತಗೊಳಿಸುವುದಾಗಿ ಆಹಾರ ಇಲಾಖೆ ಸೂಚನೆ ನೀಡಿದೆ. ಒಂದು ವೇಳೆ ಇದನ್ನು ತಪ್ಪಿಸಿದರೆ ಸೆಪ್ಟೆಂಬರ್ ತಿಂಗಳಿಂದ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ ಉಚಿತ ಪಡಿತರ ಹಾಗೂ ಅನ್ನಭಾಗ್ಯ ಯೋಜನೆಯ ಹಣವನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ ಇಲಾಕೆ ಖಡಕ್ ಸೂಚನೆ ನೀಡಿದೆ. ಅದೇ ರೀತಿ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಜಾಗೃತಿ ಮೂಡಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಗಳ E-kyc ಆಗಿರದ ಪಡಿತರ ಚೀಟಿದಾರರ ಹೆಸರನ್ನು ನ್ಯಾಯಬೆಲೆ ಅಂಗಡಿಯ ನಾಮಫಲಕದಲ್ಲಿ ಹಾಕುವಂತೆ ಜಿಲ್ಲಾ ಜಂಟಿ/ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...