
ಬೆಂಗಳೂರು : ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ 92 ಲಕ್ಷ ಅರ್ಹ ಫಲಾನುಭವಿಗಳಿಗೆ ಯೋಜನೆ ಮೂಲಕ ಹಣ ಖಾತೆಗೆ ಜಮಾ ಆಗಿದ್ದು,ಇನ್ನೂ 18 ಲಕ್ಷ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ.
ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿ, ಬ್ಯಾಂಕ್ ಖಾತೆ ಮಾಹಿತಿ ಹಾಗೂ ಆಧಾರ್ ಕಾರ್ಡ್ನಲ್ಲಿರುವ ಮಾಹಿತಿ. ಈ ಮೂರು ಕೂಡ ಒಂದೇ ಆಗಿರಬೇಕು. ನಿಮ್ಮ ಹೆಸರು, ಮನೆ ವಿಳಾಸ, ನಿಮ್ಮ ಹೆಸರಿಗೆ ಇನ್ಶಲ್ ಇದ್ದರೆ ಅದು ಕೂಡ ಸರಿಯಾಗಿ ಇರಬೇಕು. ಈ ಸಮಸ್ಯೆ ಇರುವ ಕಾರಣದಿಂದಲೇ ಇನ್ನೂ 8-9 ಲಕ್ಷ ಮಂದಿಗೆ ಹಣ ವರ್ಗಾವಣೆ ಆಗಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.
ಇ-ಕೆವೈಸಿ ಮಾಡದ ಕಾರ್ಡ್ಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ ಹೀಗಾಗಿ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ, ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಂಡರೆ ಈ ತಿಂಗಳಿನಿಂದ ನಿಮ್ಮ ಖಾತೆಗೆ ಗೃಹ ಲಕ್ಷ್ಮಿ ಹಣ ಜಮಾ ಆಗಲಿದೆ.