ಬೆಂಗಳೂರು : ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.12 ಇಂದು ಕೊನೆಯ ದಿನಾಂಕವಾಗಿದೆ, . ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಜ.12ರ ರೊಳಗಾಗಿ ಸಲ್ಲಿಕೆ ಮಾಡಬಹುದಾಗಿದೆ.
ಕಳೆದ ವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ್ದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ಜ.12ಕ್ಕೆ ಮುಂದೂಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ತಿಳಿಸಿದ್ದರು. ಸಾರ್ವಜನಿಕರು ಮತದಾರ ಪಟ್ಟಿಗೆ ಹೆಸರು ಸೇರಿಸುವುದು, ತಿದ್ದುಪಡಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಜ.12ರ ವರೆಗೆ ಸಲ್ಲಿಕೆ ಮಾಡಬಹುದು ಎಂದು ತಿಳಿಸಿದ್ದರು.