alex Certify ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಪ್ಲೊಮಾ, ಪದವೀಧರರೇ ಗಮನಿಸಿ : ‘ಯುವನಿಧಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ನಿನ್ನೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಯುವನಿಧಿ ನೋಂದಣಿಗೆ ಚಾಲನೆ ನೀಡಿದರು . ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಅರ್ಹತೆಗಳು

1) 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
2) ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು ಅರ್ಜಿ ಸಲ್ಲಿಸಬಹುದಾಗಿದೆ.
3) ಸ್ವಯಂ ಉದ್ಯೋಗ ಹೊಂದಿಲ್ಲದವರು
4) ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು
5) ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು)
6) ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರ ಅಗತ್ಯವಾಗಿದೆ.
7) ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಬಹುದು. ಯುವನಿಧಿಗೆ ಅರ್ಜಿ ಸಲ್ಲಿಸಲು ಬಯಸುವವರು ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅಥವಾ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬೇಕಾಗುತ್ತದೆ.

ಅರ್ಜಿ ಸಲ್ಲಿಸುವವರಿಗೆ ಮುಖ್ಯ ಸೂಚನೆ

1) ನೇರ ನಗದು ವರ್ಗಾವಣೆ (Direct Transfer) ಸ್ವೀಕರಿಸಲು ಆಧಾರ್ ಸಂಖ್ಯೆಯೊಂದಿಗೆ (Aadhar-seeded) ಬ್ಯಾಂಕ್ ಖಾತೆಯನ್ನು ನೀವು ಹೊಂದಿರಬೇಕು.
2) Aadhar-linked mobile number ಅಂದರೆ ನಿಮ್ಮ ಆಧಾರ್ ಸಂಖ್ಯೆಯೊಂದಿಗೆ ಅಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ನೀಡಬೇಕು. ಹೆಚ್ಚಿನ ಮಾಹಿತಿ ಅಥವಾ ಸಹಾಯವಾಣಿಗಾಗಿ 1800 599 9918 ಸಂಪರ್ಕಿಸಬಹುದಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...