alex Certify Yuavanidhi Scheme : ಪದವೀಧರರೇ ಗಮನಿಸಿ : ‘ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Yuavanidhi Scheme : ಪದವೀಧರರೇ ಗಮನಿಸಿ : ‘ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.

2023 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1800 599 9918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ (08272-225851) ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...