alex Certify ‘ಮದ್ಯ’ ಪ್ರಿಯರೇ ಗಮನಿಸಿ : ಈ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ‘ಎಣ್ಣೆ’ ಸಿಗಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮದ್ಯ’ ಪ್ರಿಯರೇ ಗಮನಿಸಿ : ಈ ಜಿಲ್ಲೆಯಲ್ಲಿ ಇಂದಿನಿಂದ 2 ದಿನ ‘ಎಣ್ಣೆ’ ಸಿಗಲ್ಲ

ಕಲಬುರಗಿ : ಗಣಪತಿ ವಿಸರ್ಜನೆ ಹಿನ್ನೆಲೆ   ಕಲಬುರಗಿ ಜಿಲ್ಲೆಯಾದ್ಯಂತ ಇಂದಿನಿಂದ 2 ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 5 ದಿನಗಳ ಅವಧಿಯ ಗಣಪತಿ ವಿಸರ್ಜನೆ ಸಂಪ್ರದಾಯದಂತೆ ಸೆ.23 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ. 23ರ ಬೆಳಿಗ್ಗೆ 6 ಗಂಟೆಯಿಂದ ಸೆ.24ರ ಬೆಳಿಗ್ಗೆ 6 ಗಂಟೆ ವರೆಗೆ 1965ರ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಢಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಈ ಅವದಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮಧ್ಯಪಾಪವನ್ನು ನಿಷೇಧಿಸಿದಲ್ಲದೆ ಅಂಗಡಿಗಳನ್ನು ಮುಚ್ಚುವಂತೆ ಸಹ ಆದೇಶಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...