ನ.23 ರಂದು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯುವ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನ.22 ರ ಮಧ್ಯರಾತ್ರಿ 12 ಗಂಟೆಯಿಂದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ದಾವಣಗೆರೆ : ಜಗಳೂರು ಪಟ್ಟಣ ಪಂಚಾಯತಿ ವಾರ್ಡ್ ನಂ.9 ರ ವ್ಯಾಪ್ತಿಯಲ್ಲಿ ನವೆಂಬರ್ 23 ರಂದು ಮತದಾನ ನಡೆಯಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ನವೆಂಬರ್ 22 ರಂದು ಸಂಜೆ 4 ಗಂಟೆಯಿಂದ ನ.24 ರ ಸಂಜೆ 6 ಗಂಟೆವರೆಗೆ ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.