ಬೆಂಗಳೂರು : ನಮ್ಮ ಮೆಟ್ರೋ ನೇರಳ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಂಪೇಗೌಡ ಮೆಜೆಸ್ಟಿಕ್ನಿಂದ ಇಂದಿರಾನಗರದವರೆಗೆ ಜನವರಿ 19 ರಂದು ಬೆಳಗ್ಗೆ 7 ರಿಂದ ಬೆಳಗ್ಗೆ 10ರ ವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.
ನೇರಳೆ ಮಾರ್ಗದಲ್ಲಿ ಚಲ್ಲಘಟ್ಟ – ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಹಾಗೂ ವೈಟ್ಫೀಲ್ಡ್ – ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ರಿಂದಲೇ ಮೆಟ್ರೋ ಸಂಚಾರ ಇರಲಿದೆ.
ನಿರ್ವಹಣೆ ಕಾರಣದಿಂದಾಗಿ ನೇರಳೆ ಮಾರ್ಗದ ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣ ಮತ್ತು ಇಂದಿರಾ ನಗರ ನಿಲ್ದಾಣಗಳ ನಡುವಿನ ಸೇವೆಯಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಈ ನಿಲ್ದಾಣ ನಡುವೆ ಮೂರು ಗಂಟೆ ಮೆಟ್ರೋ ಸೇವೆ ಇರುವುದಿಲ್ಲ. ಜನವರಿ 19ರಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.
ಪ್ರಯಾಣಿಕರ ಗಮನಕ್ಕೆ: ಹಳಿ ನಿರ್ವಹಣಾ ಕಾಮಗಾರಿ ನಿಮಿತ್ತ ಜ.19 ರಂದು ನೇರಳೆ ಮಾರ್ಗದಲ್ಲಿನ ಕೆಂಪೇಗೌಡ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಡುವೆ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿನ ಮೆಟ್ರೋ ಸೇವೆ ಎಂದಿನಂತೆ ಇರಲಿದೆ. ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ. pic.twitter.com/eUR6DyPsC2
— ನಮ್ಮ ಮೆಟ್ರೋ (@OfficialBMRCL) January 17, 2025