alex Certify ಗಮನಿಸಿ : ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಚು. ಆಯೋಗದಿಂದ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಚು. ಆಯೋಗದಿಂದ ದಿನಾಂಕ ನಿಗದಿ

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2024ಗೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕರಡು ಮತದಾರರ ಪಟ್ಟಿಯನ್ನು ದಿ: 27-10-2023 ರಂದು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಪ್ರಚುರಪಡಿಸಿದ್ದು ಈ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿ: 09-12-2023 ರವರೆಗೆ ಕಾಲಾವಧಿಯನ್ನ ಚುನಾವಣಾ ಆಯೋಗವು ನಿಗದಿಪಡಿಸಿದೆ.

ಈ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಯಿಂದ ಬಾಧಿತರಾದವರು ತಮ್ಮ ಆಕ್ಷೇಪಣೆಯನ್ನು ಅವಶ್ಯಕತೆಗೆ ಅನುಗುಣವಾಗಿ ನಮೂನೆ 6, 7, 8 ನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಬಿಎಲ್ಓ ಆ್ಯಪ್ ಮೂಲಕ ಅಥವಾ https://www.nvsp.in/Web Portal ಹಾಗೂ Voter Helpline App ಮೂಲಕ ಸಲ್ಲಿಸಬಹುದಾಗಿರುತ್ತದೆ.

ಚುನಾವಣಾ ಆಯೋಗವು ಮತದಾರರ ವಿಶೇಷ ಆಂದೋಲನವನ್ನು ದಿ: 18-11-2023, 19-11-2023, 02-12-23 ಹಾಗೂ 03-12-2023 ರಂದು ನಿಗದಿಪಡಿಸಿದೆ. ಈ ದಿನಾಂಕಗಳಂದು ಮತಗಟ್ಟೆ ಮಟ್ಟದ ಅಧಿಕಾರಿಳು ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸಲಿದ್ದು ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ.
ಕರಡು ಮತದಾರರ ಪಟ್ಟಿಯನ್ನು ವೆಬ್ಸೈಟ್ Voter Helpline App ರಲ್ಲಿ ಪರಿಶೀಲಿಸಬಹುದಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಹಾಗೂ ಶಿವಮೊಗ್ಗ ಗ್ರಾಮಾತರ ವಿಧಾನಸಭಾ ಕ್ಷೇತ್ರ ಸಹಾಯಕ ಮತದಾರರ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...