ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆ ಆರಂಭವಾಗಿದ್ದು, ಸರ್ಕಾರ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುತ್ತಿದೆ. ಕೆಲವರ ಖಾತೆಗೆ ಹಣ ಜಮಾ ಪ್ರಕ್ರಿಯೆ ನಡೆಯುತ್ತಿದೆ.
ಆದರೆ ಕೆಲವು ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಕೆಲವರು ನಮಗೆ SMS ಬಂದಿಲ್ಲ ಹೀಗಾಗಿ ನಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದೆಯೋ ಅಥವಾ ತಡೆಹಿಡಿಯಲಾಗಿದೆಯೋ ಅಥವಾ ರದ್ದಾಗಿದೆಯೋ ಎನ್ನುವ ಗೊಂದಲದಲ್ಲಿ ಇದ್ದಾರೆ.
ಆದ್ದರಿಂದ ನೀವು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡಿಕೊಳ್ಳಲು ಅವಕಾಶ ನೀಡಿದೆ. ಈ ವಿಧಾನದ ಮೂಲಕ ನೀವು ಸಹಾ ನಿಮ್ಮ ಅರ್ಜಿ ಸ್ಥಿತಿ ಏನಾಗಿದೆ ಎಂಬುದನ್ನು ಪರಿಶೀಲನೆ ಮಾಡಬಹುದು.
ಹೇಗೆ ಸ್ಟೇಟಸ್ ಚೆಕ್ ಮಾಡುವುದು..?
1) ಮೊದಲು ನೀವು https://sevasindhugs.karnataka.gov.in/ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅದರಲ್ಲಿ ಸರ್ಕಾರದ ಎಲ್ಲಾ ಯೋಜನೆಗಳು ಶೋ ಆಗುತ್ತದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಎನ್ನುವುದನ್ನು ಸೆಲೆಕ್ಟ್ ಮಾಡಿ
2) ನಂತರ ಪೇಜ್ ಓಪನ್ ಆಗಿ ಡ್ಯಾಶ್ ಬೋರ್ಡ್ ಕಾಣುತ್ತದೆ. ಅದರಲ್ಲಿ Application Tracker ಹಾಗೂ Log in ಎನ್ನುವ ಎರಡು ಆಪ್ಷನ್ ಗಳು ನಿಮಗೆ ಕಾಣ ಸಿಗುತ್ತದೆ.
3) ನಂತರ ಇದರಲ್ಲಿ Application Tracker ಎನ್ನುವುದರ ಮೇಲೆ ಕ್ಲಿಕ್ ಮಾಡಿ, ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಕೇಳಲಾಗುತ್ತದೆ, ನಂತರ 12 ಸಂಖ್ಯೆಯಿರುವ ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ಎಂಟ್ರಿ ಮಾಡಿ.
4) ನಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಸಂಪೂರ್ಣ ವಿವರ ಬರುತ್ತದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಸಹಾಯಧನ ವರ್ಗಾವಣೆ ಆಗಿರುವ ದಿನಾಂಕ ಮತ್ತು ಅದರ ಸ್ಟೇಟಸ್ ಕೂಡ ಬಂದಿರುತ್ತದೆ .
ಸ್ಟೇಟಸ್ ಅಲ್ಲಿ Success ಎಂದು ಬಂದಿದ್ದರೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿರುತ್ತದೆ ಎಂದರ್ಥ.
5) ಇದರಲ್ಲಿ Push to DBT ಎಂದು ಇದ್ದರೆ ನಿಮ್ಮ ಖಾತೆಗೆ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆಯಲ್ಲಿದೆ ಎಂದರ್ಥ, ಅಂದರೆ ನಿಮ್ಮ ಖಾತೆಗೆ ಶೀಘ್ರದಲ್ಲೇ ಹಣ ಜಮೆ ಆಗುತ್ತದೆ.