alex Certify ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡಲು ಜಸ್ಟ್ ಹೀಗೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡಲು ಜಸ್ಟ್ ಹೀಗೆ ಮಾಡಿ

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ನಾಳೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ.

ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ತುಂಬಿದ ಸಂದರ್ಭದಲ್ಲಿಯೇ ಸಿಎಂ ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೊಳ್ಳಲಿದೆ. ನಾಳೆ ಸಿಎಂ ಸಿದ್ದರಾಮಯ್ಯ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ 2000 ಹಣ ವರ್ಗಾವಣೆ ಮಾಡಲಿದ್ದಾರೆ.

ಇದೀಗ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಲಿಸ್ಟ್ ನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಈ ವಿಧಾನದ ಮೂಲಕ ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯಾ..ಇಲ್ಲವಾ ಎಂದು ಚೆಕ್ ಮಾಡಿಕೊಳ್ಳಬಹುದು.

ಚೆಕ್ ಮಾಡುವ ವಿಧಾನ

1) ಮೊದಲು ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿಕೊಡಬೇಕು. https://ahara.kar.nic.in/WebForms/Show_Village_List.aspx

2) ಮೆನು ಬಾರ್ ಅಲ್ಲಿ ‘E service’ ಎನ್ನುವ ಆಯ್ಕೆ ಕಾಣುತ್ತದೆ, ಅದನ್ನು ಕ್ಲಿಕ್ ಮಾಡಿ

3) ನಂತರ ಪೇಜ್ ನ ಎಡಭಾಗದಲ್ಲಿ ಎಲ್ಲಾ ಸೇವೆಗಳ ಲಿಸ್ಟ್ ಬರುತ್ತದೆ. ಅದರಲ್ಲಿ ಇ-ರೇಷನ್ ಕಾರ್ಡ್ ಎನ್ನುವುದನ್ನು ಸೆಲೆಕ್ಟ್ ಮಾಡಿ ಮತ್ತಷ್ಟು ಸೇವೆಗಳ ವಿವರ ಬರುತ್ತದೆ ಅದರಲ್ಲಿ ವಿಲೇಜ್ ಲಿಸ್ಟ್ ಎನ್ನುವುದನ್ನು ಕ್ಲಿಕ್ ಮಾಡಿ. ಅಲ್ಲಿ ಜಿಲ್ಲಾವಾರು ಲಿಂಕ್ ಇರುತ್ತದೆ, ಅದರಲ್ಲಿ ನಿಮ್ಮ ಜಿಲ್ಲೆ ಇರುವ ಲಿಂಕ್ ಸೆಲೆಕ್ಟ್ ಮಾಡಿ. ನಂತರ ತಾಲೂಕು, ಗ್ರಾಮ ಪಂಚಾಯತ್, ವಿಲೇಜ್ ಸೆಲೆಕ್ಟ್ ಮಾಡಿ ನಂತರ GO ಆಪ್ಶನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮ್ಮ ಊರಿನ ಫಲಾನುಭವಿಗಳ ಪಟ್ಟಿ ಬರುತ್ತದೆ. ಅಲ್ಲಿ ನಿಮ್ಮ ಹೆಸರನ್ನು ಸರ್ಚ್ ಮಾಡಬಹುದು. ಒಂದು ವೇಳೆ ಪಟ್ಟಿ ಓಪನ್ ಆಗಿದ್ದರೆ ಸರ್ವರ್ ತೊಂದರೆ ಇರುತ್ತದೆ. ಸ್ವಲ್ಪ ಸಮಯದ ಬಳಿಕ ಸರ್ಚ್ ಮಾಡಿ.

ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾಲ್ಗೊಳ್ಳಲಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಡಿ ನಾಳೆ ಐದು ಜಿಲ್ಲೆಯ ಫಲಾನುಭವಿಗಳ ಖಾತೆಗೆ 2 ಸಾವಿರ ರೂ. ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ರಾಹುಲ್ ಗಾಂಧಿ ದೆಹಲಿಯಿಂದ ಬುಧವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದ್ದು, ಅಲ್ಲಿಂದ ಮೈಸೂರಿಗೆ ತೆರಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...