ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನ. 15 ರವರೆಗೆ ವಿಸ್ತರಿಸಲಾಗಿದೆ.
https://cbseitms.nic.in/2023/nvsix/PrincipalLogin/getafflictionno ವೈಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 2023-24ರ ಶೈಕ್ಷಣಿಕ ಅವಧಿಯಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
9ನೇ ತರಗತಿಗೆ ಅರ್ಜಿ ಸಲ್ಲಿಸಲು 2009 ಮೇ 05 ರಿಂದ 2011ರ ಜುಲೈ 31 ರ ನಡುವೆ ಜನಿಸಿರಬೇಕು. 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007 ಜೂನ್ 01 ರಿಂದ 2009 ಜುಲೈ 31 ರ ನಡುವೆ ಜನಿಸಿರಬೇಕು. ಎಸ್ಸಿ, ಎಸ್ಟಿ, ಒಬಿಸಿ ವರ್ಗಗಳಿಗೆ ಸೇರಿದಂತೆ ಎಲ್ಲಾ ವರ್ಗದ ಅಭರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.