ವಿಜಯನಗರ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ್ ನೆಹರು ನವೋದಯ ಶಾಲೆಯ 2025-26 ನೇ ಸಾಲಿನ ಪ್ರವೇಶ ಪರೀಕ್ಷೆಯ ದಿನಾಂಕ ನಿಗಧಿಯಾಗಿದ್ದು, ಜ.18 ರಂದು ಬೆಳ್ಳಿಗೆ 11 ಗಂಟೆಗೆ ಜಿಲ್ಲೆಯ ಆಯಾ ತಾಲೂಕಿನಲ್ಲಿ ನಿಗದಿಪಡಿಸಿದ ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಚಿಕ್ಕಜೋಗಿಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ವೆಬ್ಸೈಟ್ https://cbseitms.rcil.gov.in/nvs/AdminCard ನಲ್ಲಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.