ಶಿವಮೊಗ್ಗ: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಪಿಂಚಣಿ ಯೋಜನೆಯಡಿಯಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು, ಸುಮಾರು 5577 ಪಿಂಚಣಿದಾರರು ತಮ್ಮ ಜೀವನ ಪ್ರಮಾಣ ಪತ್ರವನ್ನು ಇದುವರೆಗೂ ಸಲ್ಲಿಸಿರುವುದಿಲ್ಲವಾದ್ದರಿಂದ ಪಿಂಚಣಿ ಸ್ಥಗಿತವಾಗಿರುತ್ತದೆ.
ಜೀವನ ಪ್ರಮಾಣ ಪತ್ರ ಸಲ್ಲಿಸದೇ ಇರುವ ಪಿಂಚಣಿದಾರರು ಅಂಚೆ ಕಚೇರಿಯಲ್ಲಿ ಅಥವಾ ಬ್ಯಾಂಕ್ನಲ್ಲಿ ಅಥವಾ ತಮ್ಮ ಆಂಡ್ರಾಯ್ಡ್ ಮೊಬೈಲ್ ಫೋನ್ ಮೂಲಕ ಫೇಸ್ ಅಥೆಂಟಿಕೇಷನ್ ಟೆಕ್ನಾಲಜಿಯನ್ನು ಅಳವಡಿಸಿಕೊಂಡು ಜೀವನ ಪ್ರಮಾಣ ಪತ್ರ ಸಲ್ಲಿಸುವಂತೆ ಕ್ಷೇತ್ರೀಯ ಭವಿಷ್ಯ ನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.