alex Certify BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಡಿ.31 ರೊಳಗೆ ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಡಿ.31 ರೊಳಗೆ ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ

ಬೆಂಗಳೂರು : ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ.

ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ.

ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಂ ‘ಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದುಕೊಂಡಿರುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚಿಟಿ ಪಡೆದುಕೊಂಡಿರುವವರು ಕೂಡಲೇ ತಾಲ್ಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಆರು ತಿಂಗಳಿನಿಂದ ರೇಷನ್ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದೆ.ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ಡಿ. 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು.ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...