ಕಲಬುರಗಿ : ಪಡಿತರ ಚೀಟಿದಾರರೇ ಗಮನಿಸಿ… ಆಹಾರ ಇಲಾಖೆಯಿಂದ ಕಲಬುರಗಿ ಜಿಲ್ಲಾ ವ್ಯಾಪ್ತಿಯಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ನವೆಂಬರ್ 29 ಹಾಗೂ ನವೆಂಬರ್ 30ರಂದು ಅವಕಾಶ ನೀಡಿದ್ದು, ಪಡಿತರ ಚೀಟಿದಾರರು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಜಿಎಸ್ಸಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಹಾಗೂ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ನವೆಂಬರ್ 29 ಹಾಗೂ 30 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ತಿದ್ದುಪಡಿ ಮಾಡಲಾಗುತ್ತದೆ.
ಸದಸ್ಯರ ಹೆಸರು ಸೇರ್ಪಡೆ, ತಿದ್ದುಪಡಿ, ಪಡಿತರ ಚೀಟಿಯಲ್ಲಿನ ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಹಾಗೂ ಆದ್ಯತೇತರ ಪಡಿತರ ಚೀಟಿದಾರರು ಪಡಿತರ ಪಡೆಯಲು ಇಚ್ಛೆ ವ್ಯಕ್ತಪಡಿಸಲು 2 ದಿನಗಳು ಅವಕಾಶ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಾದ ಶಾಂತಗೌಡ ಜಿ.ಗುಣಕಿ ಹೇಳಿದ್ದಾರೆ.