ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಡಿ.30 ರೊಳಗೆ ತಪ್ಪದೇ ಲಿಂಕ್ ಮಾಡಿಸಬೇಕು.
ಎಲ್ಲಾ ಪಡಿತರ ಚೀಟಿದಾರರು ಕೂಡ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲೇಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕೆ ನೀಡಿದ್ದ ಸಮಯಾವಕಾಶವನ್ನು ಡಿಸೆಂಬರ್ 30 ಕಡೆ ಬಾರಿಗೆ ವಿಸ್ತರಿಸಿದೆ. ಈ ದಿನಾಂಕದೊಳಗಾಗಿ ಲಿಂಕ್ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ದಂಡ ತೆರಬೇಕಾಗಿ ಬರಬಹುದು ಅಥವಾ ರೇಷನ್ ಕಾರ್ಡ್ ರದ್ದಾಗಬಹುದು.
ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದರಿಂದ ಕುಟುಂಬದ ಸದಸ್ಯರ ವಿವರ ನಿಖರವಾಗಿ ಸರ್ಕಾರಕ್ಕೆ ಸಿಗುತ್ತದೆ, ಈ ಮೂಲಕ ನಕಲಿ ಫಲಾನುಭವಿಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದು.
ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವುದು ಹೇಗೆ..?
ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಆನ್ಲೈನ್ನಲ್ಲಿ ಲಿಂಕ್ ಮಾಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:
• ನಿಮ್ಮ ರಾಜ್ಯದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ ಅಧಿಕೃತ ವೆಬ್ಸೈಟ್ ಗೆ ಹೋಗಿ.
• ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
• ‘ಮುಂದುವರಿಯಿರಿ’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್ (ಒಟಿಪಿ) ಬರುತ್ತದೆ.
• ಒಟಿಪಿ ನಮೂದಿಸಿ ಮತ್ತು ಪಡಿತರ ಚೀಟಿ ಆಧಾರ್ ಕಾರ್ಡ್ ಲಿಂಕ್ ಕ್ಲಿಕ್ ಮಾಡಿ