alex Certify ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಇಂದಿನಿಂದ ‘ಕೆಂಪು-ಹಳದಿ’ ಟ್ಯಾಗ್ ಧರಿಸುವುದು ಕಡ್ಡಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಇಂದಿನಿಂದ ‘ಕೆಂಪು-ಹಳದಿ’ ಟ್ಯಾಗ್ ಧರಿಸುವುದು ಕಡ್ಡಾಯ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಇಂದಿನಿಂದ ಕೆಂಪು-ಹಳದಿ ಟ್ಯಾಗ್ ಧರಿಸುವುದು ಕಡ್ಡಾಯವಾಗಿದೆ.

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದರ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿತ್ತು. ಇಂದಿನಿಂದ ಈ ನಿಯಮ ಪಾಲಿಸುವುದು ಕಡ್ಡಾಯವಾಗಿದೆ.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...