alex Certify ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಡಿ.20 ಲಾಸ್ಟ್ ಡೇಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ವಿದ್ಯಾರ್ಥಿ ವೇತನ’ ಸೇರಿ ವಿವಿಧ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಡಿ.20 ಲಾಸ್ಟ್ ಡೇಟ್.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ “ಶುಲ್ಕ ಮರುಪಾವತಿ” ಹಾಗೂ ‘’ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’’ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 20ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ರಾಜ್ಯ ವಿದ್ಯಾರ್ಥಿವೇತನ ವೆಬ್ ಸೈಟ್ https://ssp.postmatric.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 8050770005 ಅಥವಾ ಇ-ಮೇಲ್ ವಿಳಾಸ: bcwdhelpline@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...