ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಯು.ಜಿ ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ದಿನಾಂಕ 28.06.2023 ರಂದು ಬೆಂಗಳೂರು ಪ್ರಾದೇಶಿಕ ಕೇಂದ್ರ -1, ಬಾಪೂಜಿನಗರ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ಪ್ರವೇಶಾತಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30ರ ಕಡೆಯ ದಿನವಾಗಿದೆ.
ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆನ್ ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಬಹುದು ಹಾಗೂ ಇನ್ನೂ ಅರ್ಜಿ ಹಾಕಿಲ್ಲದೇ ಇರುವ ವಿದ್ಯಾರ್ಥಿಗಳು ವಿಶ್ವವಿದ್ಯಾ ನಿಲಯದ ಅಧಿಕೃತ ವೆಬ್ ಸೈಟ್ www.ksoumyasuru.ac.in ನಲ್ಲಿ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಅಥವಾ ದೂರವಾಣಿ ಸಂಖ್ಯೆ: 080-26603664 ಹಾಗೂ 98449 65515 ಅನ್ನು ಸಂಪರ್ಕಿಸಬಹುದೆಂದು ಕ.ರಾ.ಮು.ವಿ.ಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.