ಬೆಂಗಳೂರು : ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಈಗಾಗಲೇ ಮಹಿಳೆಯರ ಖಾತೆಗೆ 2000 ರೂ. ಹಣ ಜಮಾ ಆಗಿದೆ. ಕೆಲವರ ಖಾತೆಗೆ ಜಮಾ ಪ್ರಕ್ರಿಯೆ ನಡೆಯುತ್ತಿದೆ. ಸೆ.5 ರೊಳಗೆ ಎಲ್ಲಾ ಯಜಮಾನಿಯರ ಖಾತೆಗೆ ಹಣ ಜಮಾ ಆಗಬಹುದು.
ಇನ್ನೂ2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ.
1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸದವರಿಗೆ ಹಣ ಬರುವುದಿಲ್ಲ ಎಂದು ಹೇಳಲಾಗಿದೆ.
2) ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮಾಹಿತಿಯಲ್ಲಿ ತಿದ್ದುಪಡಿ, ತೊಂದರೆ ಇದ್ದರೆ ಸರಿ ಮಾಡಿಸಿ ಆಧಾರ್ ಕಾರ್ಡ್ ಲಿಂಕ್, NPCI ಮ್ಯಾಪಿಂಗ್ ಮಾಡಿಸಿದರೆ ಅವರು ಮುಂದಿನ ತಿಂಗಳಿನಿಂದ 2000 ರೂ ಪಡೆಯಬಹುದು.
3) ಇದುವರೆಗೆ ಅರ್ಜಿ ಸಲ್ಲಿಸದವರು ಹಾಗೂ ತಾಂತ್ರಿಕ ತೊಂದರೆಯಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇರುವವರು ಎಲ್ಲವನ್ನು ಸರಿಮಾಡಿಕೊಂಡು ಅರ್ಜಿ ಸಲ್ಲಿಸಿದರೆ ಸೆಪ್ಟೆಂಬರ್ ನಿಂದ ಹಣ ಪಡೆಯಬಹುದು.