![](https://kannadadunia.com/wp-content/uploads/2023/12/gruhalakshmi-1.jpg)
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿದ್ದ ಕ್ಯಾಂಪ್ ಗೆ ಇಂದು ಕೊನೆಯ ದಿನವಾಗಿದೆ.
ಕ್ಯಾಂಪ್‍ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ,. ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹಾರ ಒದಗಿಸಲಾಗುತ್ತದೆ.
ಸಮಸ್ಯೆ ಬಗೆಹರಿಸಿಕೊಳ್ಳದ ಫಲಾನುಭವಿಗಳು ಇಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬಹುದು.
ಈ ಸಮಸ್ಯೆಗಳಿಗೆ ಪರಿಹಾರ : ಆಧಾರ್ ಜೋಡಣೆ, ಬ್ಯಾಂಕ್ ಸಮಸ್ಯೆ, ಇ-ಕೆವೈಸಿ, ಹೊಸ ಬ್ಯಾಂಕ್ ಖಾತೆ ಆರಂಭ.
ಜೊತೆಗೆ ತರಬೇಕಾದ ದಾಖಲೆಗಳು : ತಮ್ಮ ಆಧಾರ್ ಕಾರ್ಡ್, ಪತಿಯ ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ