ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ : ಉಚಿತ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು : ಕಾರ್ಮಿಕ ಇಲಾಖೆಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ. 

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-2024ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಛಿಸಿದ್ದಲ್ಲಿ, ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬುಹುದಾಗಿರುತ್ತದೆ.

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಸೆ.19 ಅಂತಿಮ ದಿನವಾಗಿದ್ದು, ಆದರೆ ಎರಡು ದಿನ ರಜೆಗಳು ಬಂದಿರುವ ಮೇರೆಗೆ ಸೆ. 22ರ ಸಾಯಂಕಾಲ 5:30ರ ವರೆಗೆ ಅರ್ಜಿ ಸಲ್ಲಿಕೆಗಾಗಿ ಅವಕಾಶ ಕಲ್ಪಿಸಲಾಗಿದೆ. ತದನಂತರ ಬರುವ ಯಾವುದೇ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸುವುದಿಲ್ಲ. ಇದೇ ಅಂತಿಮ ದಿನಾಂಕವೆಂದು ಪರಿಗಣಿಸಬೇಕು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read