ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಮಹಾಮಾರಿ ತಾಂಡವವಾಡುತ್ತಿದ್ದು, ಮಾರಕ ಜ್ವರಕ್ಕೆ ಮೃತಪಡುವವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ.ಆದ್ದರಿಂದ ಸಾರ್ವಜನಿಕರು ಡೆಂಗ್ಯೂ ಜ್ವರದ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಡೆಂಗ್ಯೂ ಜ್ವರದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ.
ಲಕ್ಷಣಗಳು
ಇದ್ದಕ್ಕಿದ್ದಂತೆ ತೀವ್ರ ಜ್ವರ
ಕಣ್ಣುಗಳ ಹಿಂಭಾಗದಿಂದ ನೋವು
ವಾಂತಿ, ವಾಕರಿಕೆ
ದೇಹ ಮತ್ತು ಕೀಲು ನೋವುಗಳು
ರಕ್ತದಲ್ಲಿ ಹೆಚ್ಚಿದ ಹೆಮಟೋಕ್ರಿಟ್ (ಹಿಮೋಗ್ಲೋಬಿನ್).
ಅದೇ ಸಮಯದಲ್ಲಿ ಪ್ಲೇಟ್ಲೆಟ್ಗಳು ವೇಗವಾಗಿ ಕುಸಿಯುತ್ತವೆ.
ಹೊಟ್ಟೆ ನೋವು, ಆಯಾಸ
ಹೊಟ್ಟೆ ಅಥವಾ ಎದೆಯಲ್ಲಿ ನೀರಿನ ಶೇಖರಣೆ
ನಿಲ್ಲದೆ ವಾಂತಿ
ಒಸಡುಗಳಂತಹ ಭಾಗಗಳಿಂದ ರಕ್ತಸ್ರಾವ
ಚರ್ಮದ ಮೇಲೆ ಕೆಂಪು ಚುಕ್ಕೆಗಳ ಕಲೆಗಳು
ರಕ್ತದೊತ್ತಡದಲ್ಲಿ ಇಳಿಕೆ, ಮೂರ್ಛೆ
ಡೆಂಗ್ಯೂ ಬರದಂತೆ ತಡೆಗಟ್ಟುವ ಕ್ರಮಗಳು
1) ಡೆಂಗ್ಯೂ ಬಂದ ನಂತರ ಬಳಲುವುದಕ್ಕಿಂತ ಸೋಂಕಿಗೆ ಒಳಗಾಗುವುದನ್ನು ತಪ್ಪಿಸುವುದು ಉತ್ತಮ.
2) ಡೆಂಗ್ಯೂವನ್ನು ಸಂಪೂರ್ಣವಾಗಿ ತಪ್ಪಿಸಬಹುದು. ಸಂಗ್ರಹಿಸಿದ ನೀರಿನಲ್ಲಿ ಡೆಂಗ್ಯೂ ಸೊಳ್ಳೆಗಳು ಬೆಳೆಯುತ್ತವೆ. ಆದ್ದರಿಂದ ಮನೆಯ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
3) ಹಳೆಯ ಟೈರ್ ಗಳು ಮತ್ತು ಕ್ಯಾನ್ ಗಳನ್ನು ತಕ್ಷಣ ತೆಗೆದುಹಾಕಬೇಕು.
4) ವಾರಕ್ಕೊಮ್ಮೆ ನಿಮ್ಮ ಮನೆಯ ಸುತ್ತ ಕೀಟನಾಶಕಗಳನ್ನು ಸಿಂಪಡಿಸಿ
5 ) ಡೆಂಗ್ಯೂ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಸಕ್ರಿಯವಾಗಿರುತ್ತವೆ. ಆದ್ದರಿಂದ, ಹಗಲಿನಲ್ಲಿ ಮಲಗುವಾಗ ಹಾಸಿಗೆಗೆ ಸೊಳ್ಳೆ ಪರದೆಗಳನ್ನು ಬಳಸಬೇಕು.
6) ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸದಂತೆ ಜಾಲರಿಯನ್ನು ಬಿಗಿಗೊಳಿಸಬೇಕು.
* ಮಹಾಮಾರಿ ಡೆಂಗ್ಯೂ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರು ತಮ್ಮ ಮನೆಯ ಒಳಾಂಗಣ ಮತ್ತು ಹೊರಾಂಗಣ ಪ್ರದೇಶಗಳಲ್ಲಿ ನೀರು ಸಂಗ್ರಹಣೆಯಾಗದಂತೆ ನೋಡಿಕೊಳ್ಳಬೇಕು.
* ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಡೆಂಗಿ ಜ್ವರ ಹರಡಲಿದ್ದು, ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಅವು ಕಚ್ಚುತ್ತವೆ. ಜನ ಸಾಮಾನ್ಯರು 5-6 ದಿನಗಳಿಗೊಮ್ಮೆ ಶೇಖರಣೆ ಮಾಡಿಕೊಂಡ ನೀರಿನ ತೊಟ್ಟಿ, ಡ್ರಮ್, ಬ್ಯಾರೆಲ್ ಇತರೆ ನೀರಿನ ಸಂಗ್ರಹಾರಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು.
* ಸಾರ್ವಜನಿಕರು ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆ ನೀರಿನಲ್ಲಿ ಈಡೀಸ್ ಸೊಳ್ಳೆ ಉತ್ಪತ್ತಿಯಾಗದಂತೆ ತಡೆಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು.
* ಈಡೀಸ್ ಈಜಿಪ್ಟೈ ಸೊಳ್ಳೆ ಕಡಿತದಿಂದ ಹರಡುವ ಡೆಂಗೀ ಜ್ವರವು ವೈರಾಣುಗಳಿಂದ ಉಂಟಾಗುತ್ತದೆ. ಡೆಂಗ್ಯು ಜ್ವರದ ಲಕ್ಷಣಗಳಾದ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು, ವಾಕರಿಕೆ, ವಾಂತಿ, ರಕ್ತಸ್ರಾವ, ಒಸಡುಗಳಲ್ಲಿ ರಕ್ತಸ್ರಾವ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣವೇ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು.